Home Temple ಗುರುವಾರದ “ಗುರುಪುಷ್ಯ ಯೋಗ” ಪ್ರಯುಕ್ತ ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಅಭಿಷೇಕ ವಿಶೇಷ ಅಲಂಕಾರ

ಗುರುವಾರದ “ಗುರುಪುಷ್ಯ ಯೋಗ” ಪ್ರಯುಕ್ತ ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಅಭಿಷೇಕ ವಿಶೇಷ ಅಲಂಕಾರ

0

ಬೆಂಗಳೂರು: ಬೆಂಗಳೂರಿನ ಜಯನಗರ ಐದನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶ ಅನುಗ್ರಹದೊಂದಿಗೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್. ಕೆ. ವಾದೀಂದ್ರಾಚಾರ್ ಮಾರ್ಗದರ್ಶನದಲ್ಲಿ “ಗುರುಪುಷ್ಯ” ಯೋಗ ನಿಮಿತ್ತ ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಅಷ್ಟೋತ್ತರ ಸಹಿತ ಫಲಪಂಚಾಮೃತ ಅಭಿಷೇಕವು ನೆರವೇರಿಸಲಾಯಿತು. ನಂತರದಲ್ಲಿ ವಿಶೇಷ ಪುಷ್ಪಗಳಿಂದ ಅಲಂಕಾರವನ್ನು ಮಾಡಿ ಮಹಾಮಂಗಳಾರತಿಯು ನೆರವೇರಿತು ಎಂದು ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದರು.

ಈ ಸಂದರ್ಭದಲ್ಲಿ ಹಿರಿಯ ಚಿತ್ರನಟಿ ಶ್ರೀಮತಿ ಪದ್ಮಜ ರಾವ್ ರವರು ಈ ದಿನ ಸನ್ನಿಧಿಗೆ ಆಗಮಿಸಿ ಗುರುಗಳಲ್ಲಿ ಪ್ರಾರ್ಥನೆ ಸಲ್ಲಿಸಿ ದೀಪಗಳನ್ನು ಬೆಳಗಿಸಿ ಫಲಮಂತ್ರಾಕ್ಷತೆಯನ್ನು ಸ್ವೀಕರಿಸಿ ಗುರುಗಳ ಅನುಗ್ರಹಕ್ಕೆ ಪಾತ್ರರಾದರು. ಶ್ರೀ ಗುರು ರಾಯರ ಸನ್ನಿಧಿಗೆ ಆಗಮಿಸಿದ ಸಹಸ್ರಾರು ಭಕ್ತರು ಅನ್ನಸಂಪರ್ಪಣೆಯ ಪ್ರಸಾದವನ್ನು ಸ್ವೀಕರಿಸಿದರು. ಸಂಜೆ ಭಕ್ತಾದಿಗಳು ಕಾರ್ತೀಕ ದೀಪೋತ್ಸವ ಪ್ರಜ್ವಲಿಸಿದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕು|| ರಕ್ಷಿತಾ ಶರ್ಮಾ ಅವರು ತಮ್ಮ ಇಂಪು ಸಂಗೀತ ಶಾಲೆಯ ವಿದ್ಯಾರ್ಥಿಗಳೊಂದಿಗೆ ದಾಸವಾಣಿ ಕಾರ್ಯಕ್ರಮ ನಡೆಸಿಕೊಟ್ಟರು. ಈ ಎಲ್ಲಾ ಕಾರ್ಯಕ್ರಮಗಳಲ್ಲೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ರಾಘವೇಂದ್ರ ಸ್ವಾಮಿಗಳ ಅನುಗ್ರಹಕ್ಕೆ ಪಾತ್ರರಾದರು.

Previous articleParle Agro launched SMOODH Lassi, pioneering a new era in the Indian Lassi Market
Next articleಬೆಂಗಳೂರಿನ ಕೋರಮಂಗಲದಲ್ಲಿ ಹೊಸ ಕೇಂದ್ರ ಪ್ರಾರಂಭಿಸಿದ ಮಾಯಾ ಅಕಾಡೆಮಿ ಆಫ್ ಅಡ್ವಾನ್ಸ್ಡ್ ಕ್ರಿಯೇಟಿವಿಟಿ (MAAC)

LEAVE A REPLY

Please enter your comment!
Please enter your name here