Home Cinema ಫೆಬ್ರವರಿ 29 ರಿಂದ ಮಾರ್ಚ್ 7 ರವರೆಗೆ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಮಾನವೀಯತೆಯ ಸಂದೇಶಗಳು ಸಮಾಜಕ್ಕೆ ತಲುಪಬೇಕು:...

ಫೆಬ್ರವರಿ 29 ರಿಂದ ಮಾರ್ಚ್ 7 ರವರೆಗೆ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಮಾನವೀಯತೆಯ ಸಂದೇಶಗಳು ಸಮಾಜಕ್ಕೆ ತಲುಪಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

0

ಬೆಂಗಳೂರು, ಜನವರಿ 5: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ  ಇಂದು ನಡೆದ ಬೆಂಗಳೂರು  ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆಯಲ್ಲಿ ಫೆಬ್ರವರಿ 29 ರಿಂದ ಮಾರ್ಚ್ 7 ರವರೆಗೆ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವವನ್ನು  ಏರ್ಪಡಿಸಲು  ತೀರ್ಮಾನಿಸಲಾಯಿತು.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃμÁ್ಣದಲ್ಲಿ ಇಂದು ಜರುಗಿದ ಸಂಘಟನಾ ಸಮಿತಿ ಸಭೆಯ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿಗಳು ಮಾತನಾಡಿ, ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ 15 ನೇ ಆವೃತ್ತಿಯನ್ನು ಫೆಬ್ರವರಿ  29 ರ ಸಂಜೆ ಉದ್ಘಾಟನೆಯನ್ನು ವಿಧಾನಸೌಧದ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಚಿತ್ರೋತ್ಸವವು ದೇಶವಿದೇಶಗಳಲ್ಲಿ ಮನ್ನಣೆ  ಪಡೆದಿರುವ ಚಿತ್ರೋತ್ಸವವಾಗಿದ್ದು, ವಿದೇಶಿ ಚಿತ್ರಗಳನ್ನು  ಪ್ರದರ್ಶೀಸಲಾಗುವುದಲ್ಲದೆ,  ಕನ್ನಡ ಸೇರಿದಂತೆ  ದೇಶದ ವಿವಿಧ ಭಾμÁ ಚಿತ್ರಗಳನ್ನು ಪ್ರದರ್ಶಿಸಲಾಗುವುದು ಹಾಗೂ ಮಾರ್ಚ್ 7 ರಂದು ಸಮಾರೋಪ ಸಮಾರಂಭ ನಡೆಯಲಿದ್ದು  ಅಂದು  ರಾಜ್ಯಪಾಲರು ಪ್ರಶಸ್ತಿಗಳನ್ನು ಮಾಡಲಿರುವರು ಎಂದು ತಿಳಿಸಿದರು.

ಸಂಘಟನಾ ಸಮಿತಿ ಸಭೆಯ ಜೊತೆಗೆ ಕೋರ್ ಸಮಿತಿಯೂ ರಚನೆಯಾಗಿದ್ದು, ಸಮಾರಂಭ ಯಾವ ರೀತಿ ಏರ್ಪಡಿಸಬೇಕೆಂದು ತೀರ್ಮಾನವಾಗುತ್ತದೆ. ಕೋಮುವಾದದ, ಶಾಂತಿ, ಸಮಾನತೆ, ಲಿಂಗ ಸಮಾನತೆ, ಸೌಹಾರ್ದತೆ, ಮಾನವೀಯತೆಯ ಸಂದೇಶಗಳು ಸಮಾಜಕ್ಕೆ ತಲುಪಬೇಕು. ಬಹುತ್ವಕ್ಕೆ ಹೆಚ್ಚು ಒತ್ತು ಕೊಡುವ ರೀತಿಯಲ್ಲಿ ಚಲನಚಿತ್ರೋತ್ಸವ ನಡೆಯಲಿದೆ. ಹೆಚ್ಚು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಅಗತ್ಯವಿರುವ ಆರ್ಥಿಕ ನೆರವನ್ನು ಸರ್ಕಾರ ಒದಗಿಸಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಹಿಂದೆ ವಿಧಾನಸೌಧದ ಮುಂಭಾಗದಲ್ಲಿಯೇ ಅಂತರರಾಷ್ಟ್ರಿಯ ಚಲನಚಿತ್ರೋತ್ಸವದ ಉದ್ಘಾಟನೆಯಾಗುತ್ತಿತ್ತು. ದೇಶವಿದೇಶದ ಸಿನಿರಂಗದ ಪ್ರಖ್ಯಾತ ಕಲಾವಿದರನ್ನು ಕರೆಸಲಾಗುತ್ತಿದೆ. ಈ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಗಿದ್ದು, ಈ ಬಾರಿಯೂ ಅಂತರರಾಷ್ಟ್ರಿಯ ಚಲನಚಿತ್ರೋತ್ಸವವು ಯಶಸ್ವಿಯಾಗಲಿದೆ ಎಂಬ ವಿಶ್ವಾಸವಿದೆ ಎಂದರು.

Previous articleLuLu Midnight Sale at Bengaluru; Killer Offers on Major Brands
Next articleUnveiling the Epic Tale Through Art (Over 178 Master pieces of Mahabharat) – Mahabharat Series by Mr. Swamy C.J

LEAVE A REPLY

Please enter your comment!
Please enter your name here