ಬೆಂಗಳೂರು: ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿಪರಮಪೂಜ್ಯ ಶ್ರೀ1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಜನವರಿ 2, ಗುರುವಾರದ ಪ್ರಯುಕ್ತ ಬೆಳಗ್ಗೆ ವಿಶೇಷ ಪೂಜಾ ಕೈಂಕರ್ಯಗಳು ಅನ್ನದಾನ ಸೇವೆ ಜರುಗಿದವು.
ಸಂಜೆಯ ಕಾರ್ಯಕ್ರಮದಲ್ಲಿ ರಥೋತ್ಸವ ಪಲ್ಲಕ್ಕಿ ಉತ್ಸವ ಗಜವಾಹನೋತ್ಸವ ತೊಟ್ಟಿಲು ಸೇವೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದುಷಿ ಶ್ರೀಮತಿ ಪದ್ಮಜಾ ಜಯರಾಮ್ ಅವರ ನಿರ್ದೇಶನದಲ್ಲಿ ನಾಟ್ಯ ಕಲಾರ್ಪಣ ನೃತ್ಯ ಕೇಂದ್ರದ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ ಕಾರ್ಯಕ್ರಮ ಜರುಗಿತು ಎಂದು ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದರು.
ಈ ಸಂದರ್ಭದಲ್ಲಿ ನೂರಾರು ಭಕ್ತರು ಭಾಗವಹಿಸಿ ಕಲಾವಿದರನ್ನು ಪ್ರೋತ್ಸಾಹಿಸಿ ಶ್ರೀ ಗುರುರಾಯರ ದರ್ಶನ ಪಡೆದು ತದನಂತರ ತೀರ್ಥ , ಮಂತ್ರಾಕ್ಷತೆ, ಪ್ರಸಾದ ಸ್ವೀಕರಿಸಿ ಶ್ರೀ ರಾಘವೇಂದ್ರ ಸ್ವಾಮಿಗಳ ಅನುಗ್ರಹಕ್ಕೆ ಪಾತ್ರರಾದರು