Politics – New Xpress News https://newxpressnews.com The Latest News Tue, 02 Apr 2024 13:42:02 +0000 en-US hourly 1 https://wordpress.org/?v=6.7.1 https://newxpressnews.com/wp-content/uploads/2022/09/cropped-Siteicon-32x32.png Politics – New Xpress News https://newxpressnews.com 32 32 ಮತಪ್ರಮಾಣ ಹೆಚ್ಚಿಸಿ: ರಾಜ್ಯದಲ್ಲಿ 28ಕ್ಕೆ 28 ಕ್ಷೇತ್ರ ಗೆಲ್ಲಿಸಿ: ಅಮಿತ್ ಶಾ https://newxpressnews.com/%e0%b2%ae%e0%b2%a4%e0%b2%aa%e0%b3%8d%e0%b2%b0%e0%b2%ae%e0%b2%be%e0%b2%a3-%e0%b2%b9%e0%b3%86%e0%b2%9a%e0%b3%8d%e0%b2%9a%e0%b2%bf%e0%b2%b8%e0%b2%bf-%e0%b2%b0%e0%b2%be%e0%b2%9c%e0%b3%8d%e0%b2%af/ https://newxpressnews.com/%e0%b2%ae%e0%b2%a4%e0%b2%aa%e0%b3%8d%e0%b2%b0%e0%b2%ae%e0%b2%be%e0%b2%a3-%e0%b2%b9%e0%b3%86%e0%b2%9a%e0%b3%8d%e0%b2%9a%e0%b2%bf%e0%b2%b8%e0%b2%bf-%e0%b2%b0%e0%b2%be%e0%b2%9c%e0%b3%8d%e0%b2%af/#respond Tue, 02 Apr 2024 13:38:05 +0000 https://newxpressnews.com/?p=1374 ಬೆಂಗಳೂರು, ಏಪ್ರಿಲ್ 2: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಶೇ 60 ಮತದೊಂದಿಗೆ 28ಕ್ಕೆ 28 ಕ್ಷೇತ್ರಗಳಲ್ಲೂ ಬಿಜೆಪಿ-ಜೆಡಿಎಸ್ ಗೆಲ್ಲಿಸಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮನವಿ ಮಾಡಿದರು.


ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರ ಸಮಾವೇಶವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು. ನರೇಂದ್ರ ಮೋದಿಯವರ ಸಂದೇಶ, ಅವರ ಕೆಲಸ, ಕಾಂಗ್ರೆಸ್ಸಿನ ಅಭಿವೃದ್ಧಿಶೂನ್ಯತೆ- ಭ್ರóಷ್ಟಾಚಾರ ಕುರಿತು ಮನೆಮನೆಗೆ ಮಾಹಿತಿ ತಲುಪಿಸಿ ಎಂದು ವಿನಂತಿಸಿದರು. ಈ ಮೂಲಕ 28ಕ್ಕೆ 28 ಕ್ಷೇತ್ರಗಳಲ್ಲೂ ಎನ್‍ಡಿಎ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಕೋರಿದರು.


2014ರಲ್ಲಿ ಬಿಜೆಪಿಗೆ 43 ಶೇ ಮತದೊಂದಿಗೆ 17 ಕ್ಷೇತ್ರ, 2019ರಲ್ಲಿ 51 ಶೇ ಮತದೊಂದಿಗೆ 25 ಕ್ಷೇತ್ರದಲ್ಲಿ ಗೆಲ್ಲಿಸಿದ್ದೀರಿ. ಒಂದೆಡೆ ಪ್ರಧಾನಮಂತ್ರಿ ಮೋದಿಜೀ ಇದ್ದಾರೆ. ಮುಖ್ಯಮಂತ್ರಿ ಆಗಿದ್ದಾಗ ಮತ್ತು ಪ್ರಧಾನಮಂತ್ರಿ ಆಗಿರುವಾಗ ಅವರ ಮೇಲೆ ಭ್ರಷ್ಟಾಚಾರದ ಆರೋಪವೇ ಇರಲಿಲ್ಲ. ಇನ್ನೊಂದೆಡೆ 12 ಲಕ್ಷ ಕೋಟಿಯ ಭ್ರಷ್ಟಚಾರದ ಕೂಟ ಇಂಡಿ ಇದೆ ಎಂದು ಅವರು ಟೀಕಿಸಿದರು.

ಕರ್ನಾಟಕದ ಜನರು ಭ್ರಷ್ಟಾಚಾರಿಗಳನ್ನು ಇಷ್ಟಪಡುವುದಿಲ್ಲ. ಕಾಮನ್‍ವೆಲ್ತ್, 2 ಜಿ, ಸೇಬು ಮಾರಾಟದ ಹಗರಣ, ಮಂತ್ರಿ ನಿವಾಸ ಹಗರಣ, ಜಮ್ಮು- ಕಾಶ್ಮೀರ ಹಗರಣ, ಆಗಸ್ತ ಹೆಲಿಕಾಪ್ಟರ್ ಹಗರಣ ಸೇರಿ 12 ಲಕ್ಷ ಕೋಟಿಯ ಹಗರಣ ಮಾಡಿದವರು ಇಂಡಿ ಕೂಟದಲ್ಲಿದ್ದಾರೆ. ಮೋದಿಯವರು ಒಂದು ಪೈಸೆಯ ಭ್ರಷ್ಟಾಚಾರ ಮಾಡಿಲ್ಲ ಎಂದು ವಿವರಿಸಿದರು.
ಮೋದಿಯವರೊಂದಿಗೆ ನಾನು 4 ದಶಕದಿಂದ ಕೆಲಸ ಮಾಡುತ್ತಿದ್ದೇನೆ. ಮೋದಿಯವರು 2 ದಶಕಕ್ಕೂ ಹೆಚ್ಚು ಕಾಲ ಮುಖ್ಯಮಂತ್ರಿ- ಪ್ರಧಾನಿಯಾಗಿ ಕೆಲಸ ಮಾಡಿದ್ದು, ಒಂದು ದಿನವೂ ರಜೆ ಪಡೆದಿಲ್ಲ. ರಾಹುಲ್ ಬಾಬಾ ಅವರು ಬೇಸಿಗೆ ಬಂದೊಡನೆ ವಿದೇಶಕ್ಕೆ ತೆರಳುತ್ತಾರೆ ಎಂದು ಟೀಕಿಸಿದರು.


ಬಡವರು, ವಂಚಿತರು, ಮಹಿಳೆಯರು, ಯುವಜನರಿಗಾಗಿ ವಿವಿಧ ಜನಪರ ಯೋಜನೆಗಳನ್ನು ಮೋದಿಜೀ ಜಾರಿಗೊಳಿಸಿದ್ದಾರೆ. 12 ಕೋಟಿ ಶೌಚಾಲಯ ನಿರ್ಮಿಸಿಕೊಟ್ಟಿದ್ದಾರೆ. 4 ಕೋಟಿ ಮನೆಗಳನ್ನು ನಿರ್ಮಿಸಿಕೊಟ್ಟಿದ್ದಾರೆ. 10 ಕೋಟಿ ಗ್ಯಾಸ್ ಸಿಲಿಂಡರ್ ಸಂಪರ್ಕ ಕೊಟ್ಟಿದ್ದಾರೆ. 5 ಲಕ್ಷದ ಆರೋಗ್ಯ ವಿಮೆ ಕಲ್ಪಿಸಿಕೊಟ್ಟಿದ್ದಾರೆ. ಹಲವು ದಶಕಗಳ ನಮ್ಮ ಆಶ್ವಾಸನೆಗಳನ್ನು ಈಡೇರಿಸಿದ್ದೇವೆ. 370ನೇ ವಿಧಿ ರದ್ದು ಮಾಡಿದ್ದೇವೆ ಎಂದು ವಿವರಿಸಿದರು.

500 ವರ್ಷಗಳಿಂದ ಟೆಂಟ್‍ನಲ್ಲಿದ್ದ ರಾಮಲಲಾನಿಗೆ ಭವ್ಯ ರಾಮಮಂದಿರ ನಿರ್ಮಿಸಿದ್ದೇವೆ. ಕಾಂಗ್ರೆಸ್ ಈ ವಿಚಾರದಲ್ಲಿ ನಿರಂತರ ವಿಳಂಬ ಮಾಡಿತ್ತು. ತುಷ್ಟೀಕರಣ- ಮತಬ್ಯಾಂಕಿನ ಕಾರಣಕ್ಕಾಗಿ ರಾಮಮಂದಿರದ ಉದ್ಘಾಟನೆಗೆ ಕೂಡ ಕಾಂಗ್ರೆಸ್ ಮುಖಂಡರು ಹಾಜರಾಗಿಲ್ಲ ಎಂದು ಆಕ್ಷೇಪಿಸಿದರು. ಶರಣಾರ್ಥಿಗಳಾಗಿ ಪಾಕಿಸ್ತಾನ ಮತ್ತಿತರ ದೇಶಗಳಿಂದ ಬಂದ ಹಿಂದೂ, ಸಿಕ್ಖ, ಕ್ರಿಶ್ಚಿಯನ್ ಮತ್ತಿತರರಿಗೆ ಇಲ್ಲಿನ ಪೌರತ್ವ ಕೊಡಲಾಗಿದೆ ಎಂದು ತಿಳಿಸಿದರು.

ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಾವು ಚುನಾವಣಾ ಕಣದಲ್ಲಿದ್ದೇವೆ. ಕುಟುಂಬವಾದ, ಭ್ರಷ್ಟಾಚಾರದ ಇಂಡಿ ಒಕ್ಕೂಟ ಇನ್ನೊಂದೆಡೆ ಕಣದಲ್ಲಿದೆ. ಪ್ರವಾಸಕ್ಕೆ ಹೋದಾಗ ಎಲ್ಲ ರಾಜ್ಯಗಳಲ್ಲೂ ಮೋದಿ, ಮೋದಿ ಘೋಷಣೆ ಕೇಳುತ್ತಿದೆ ಎಂದು ತಿಳಿಸಿದರು.

ಪಾಕಿಸ್ತಾನದಲ್ಲಿ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು, ಹೊಸ ಸಂಸತ್ ಭವನ, ಕ್ರಿಮಿನಲ್ ಕಾನೂನು ಬದಲಾವಣೆ, 5ನೇ ಆರ್ಥಿಕ ಶಕ್ತಿಯಾಗಿ ದೇಶವನ್ನು ಕೊಂಡೊಯ್ದ ಕುರಿತು ವಿವರ ನೀಡಿದರು. ಮೂಲಸೌಕರ್ಯಕ್ಕೆ ಆದ್ಯತೆ ಕೊಟ್ಟ ಕುರಿತು ವಿವರಿಸಿದರು. ಪ್ರಜಾಪ್ರಭುತ್ವಕ್ಕೆ ಏನೂ ಆಗಿಲ್ಲ. ಭ್ರಷ್ಟಾಚಾರಿಗಳನ್ನು ಬಚಾವ್ ಮಾಡಲು ಇಂಡಿ ಒಕ್ಕೂಟ ಮಾಡಿದ್ದಾರೆ. ಭ್ರಷ್ಟಾಚಾರಿಗಳನ್ನು ಜೈಲಿಗೆ ಕಳುಹಿಸಿದ್ದೇವೆ; ಮುಂದೆಯೂ ಕಳುಹಿಸಲಿದ್ದೇವೆ ಎಂದು ತಿಳಿಸಿದರು.

ರಾಜ್ಯದ ಅಭಿವೃದ್ಧಿ ಕಡೆ ಕಾಂಗ್ರೆಸ್ ಗಮನ ಕೊಡುತ್ತಿಲ್ಲ. ಕುರ್ಚಿ ಉಳಿಸಿಕೊಳ್ಳಲು ಸಿಎಂ ಪ್ರಯತ್ನ ನಡೆದರೆ, ಕುರ್ಚಿ ಕಸಿದುಕೊಳ್ಳಲು ಇತರರು ಪ್ರಯತ್ನ ಮಾಡುತ್ತಿದ್ದಾರೆ. ಯುಪಿಎ 10 ವರ್ಷಗಳಲ್ಲಿ ಕರ್ನಾಟಕಕ್ಕೆ 1,42,000 ಕೋಟಿ ಕೊಟ್ಟರೆ, ನಾವು 10 ವರ್ಷಗಳಲ್ಲಿ 4,91,000 ಕೋಟಿ ಕೊಟ್ಟಿದ್ದೇವೆ ಎಂದು ತಿಳಿಸಿದರು.

ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾತನಾಡಿ, ವಿಕಸಿತ ಭಾರತಕ್ಕೆ ವಿಜಯ ಸಂಕಲ್ಪ ಸಮಾವೇಶ ಇದು ಎಂದು ತಿಳಿಸಿದರು. 2047ರ ವೇಳೆಗೆ ಸ್ವಾತಂತ್ರ್ಯೋತ್ಸವದ ಶತಮಾನೋತ್ಸವದ ಸಂದರ್ಭದಲ್ಲಿ ನಮ್ಮ ದೇಶ ಅಭಿವೃದ್ಧಿ ಹೊಂದಿದ ದೇಶವಾಗಬೇಕೆಂದು ಸಂಕಲ್ಪದೊಂದಿಗೆ ಪ್ರಧಾನಿ ಮೋದಿಜೀ ಅವರು ಹಗಲು- ರಾತ್ರಿ ದುಡಿಯುತ್ತಿದ್ದಾರೆ ಎಂದು ವಿವರಿಸಿದರು. ಬಿಜೆಪಿ 10 ವರ್ಷಗಳಲ್ಲಿ ಭ್ರಷ್ಟಾಚಾರ ಆರೋಪ ಇಲ್ಲದ ಅಭಿವೃದ್ಧಿಪರ ಆಡಳಿತ ನೀಡಿದೆ ಎಂದು ತಿಳಿಸಿದರು.

ಆರ್ಥಿಕವಾಗಿ 12ನೇ ಸ್ಥಾನದಲ್ಲಿದ್ದ ಭಾರತ ಇದೀಗ ಜಗತ್ತಿನ 5ನೇ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ. 20 ಲಕ್ಷ ಕೋಟಿಗೂ ಹೆಚ್ಚು ಅನುದಾನವನ್ನು ಮೂಲಸೌಕರ್ಯ ಹೆಚ್ಚಳಕ್ಕೆ ಮೋದಿಜೀ ಅವರ ಸರಕಾರ ನೀಡಿದೆ ಎಂದರು. ಯುಪಿಎ ಸರಕಾರವು ಭ್ರಷ್ಟಾಚಾರ- ಹಗರಣಗಳನ್ನೇ ದೇಶಕ್ಕೆ ಕೊಡುಗೆಯಾಗಿ ಕೊಟ್ಟಿತ್ತು ಎಂದು ಟೀಕಿಸಿದರು.


ಅಭಿವೃದ್ಧಿ ಶೂನ್ಯ ರಾಜ್ಯ ಸರಕಾರ ಕಾಂಗ್ರೆಸ್ ಪಕ್ಷದ್ದು ಎಂದು ಆರೋಪಿಸಿದ ಅವರು, ಮತದಾರರು ಕಾಂಗ್ರೆಸ್ ಸರಕಾರಕ್ಕೆ ಶಾಪ ಹಾಕುತ್ತಿದ್ದಾರೆ. ಮಹಿಳಾ ಸುರಕ್ಷತೆ ಇಲ್ಲ. ಬಡವರು, ರೈತರಿಗೆ ಅನ್ಯಾಯವಾಗುತ್ತಿದೆ. ದೇಶದ ಸುರಕ್ಷತೆಗಾಗಿ, ಸರ್ವಾಂಗೀಣ ಅಭಿವೃದ್ಧಿಗಾಗಿ ಮೋದಿಜೀ ಮತ್ತೊಮ್ಮೆ, ಕೇಂದ್ರದಲ್ಲಿ ಬಿಜೆಪಿ ಸರಕಾರ ಬರಬೇಕೆಂದು ಜನರು ನಿರ್ಧಾರ ಮಾಡಿದ್ದಾರೆ ಎಂದು ವಿಶ್ಲೇಷಿಸಿದರು. ಮೋದಿಜೀ ಅವರ ಜನಪರ ಯೋಜನೆಗಳನ್ನು ತಿಳಿಸಿ ಬೂತ್ ಸಶಕ್ತೀಕರಣಕ್ಕೆ ಆದ್ಯತೆ ಕೊಡಿ ಎಂದು ಮನವಿ ಮಾಡಿದರು. ಬಿಜೆಪಿ- ಜೆಡಿಎಸ್ ಒಗ್ಗೂಡಿ ಕಣಕ್ಕೆ ಇಳಿದುದನ್ನು ಗಮನಿಸಿದ ಕಾಂಗ್ರೆಸ್ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹತಾಶರಾಗಿದ್ದಾರೆ. ಎಲ್ಲ 28 ಕ್ಷೇತ್ರಗಳನ್ನು ಗೆಲ್ಲಲು ಪಣತೊಡೋಣ ಎಂದು ವಿನಂತಿಸಿದರು.


ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿ, ಹಣ, ಹೆಂಡದ ಮೇಲೆ ತುಘಲಕ್ ಸರಕಾರ ನಡೆಸುವವರು ಕಾಂಗ್ರೆಸ್ಸಿಗರು ಎಂದು ಆಕ್ಷೇಪಿಸಿದರು. ನಿಮ್ಮ ಪ್ರಧಾನಿ ಅಭ್ಯರ್ಥಿ ಯಾರೆಂದು ನೀವು ಕಾಂಗ್ರೆಸ್ಸಿನವರನ್ನು ಪ್ರಶ್ನಿಸಬೇಕು ಎಂದು ಮನವಿ ಮಾಡಿದರು. 28ಕ್ಕೆ 28 ಲೋಕಸಭಾ ಕ್ಷೇತ್ರಗಳಲ್ಲಿ ನಾವು ಗೆಲ್ಲಲಿದ್ದೇವೆ ಎಂದು ವಿಶ್ವಾಸ ಸೂಚಿಸಿದರು.

ಬರಗಾಲ, ಅಭಿವೃದ್ಧಿ ರಹಿತ ಸ್ಥಿತಿಯಿಂದ ಕಾಂಗ್ರೆಸ್ ವಿರೋಧಿ ಅಲೆ ಇದೆ. ನಾವು ಪ್ರಯತ್ನಶೀಲರಾಗಿ ಎಲ್ಲ ಕ್ಷೇತ್ರಗಳನ್ನು ಗೆಲ್ಲಬೇಕಿದೆ ಎಂದು ಅವರು ತಿಳಿಸಿದರು. ಮೋದಿಜೀ ಅವರು ಮತ್ತೊಮ್ಮೆ ರಾಜ್ಯಕ್ಕೆ ಪ್ರವಾಸ ಬರಲಿದ್ದಾರೆ ಎಂದರು.
ವಿಪಕ್ಷ ನಾಯಕ ಆರ್.ಅಶೋಕ ಅವರು ಮಾತನಾಡಿ, ಮೋದಿಯವರೇ ನಮ್ಮ ಅಭ್ಯರ್ಥಿ ಎಂದು ಮನಸ್ಸಿನಲ್ಲಿಟ್ಟುಕೊಂಡು ಕೆಲಸ ಮಾಡಿ ಎಂದು ಮನವಿ ಮಾಡಿದರು. ಭ್ರಷ್ಟ ಕಾಂಗ್ರೆಸ್, ಭ್ರಷ್ಟ ಸಿಎಂ, ಡಿಸಿಎಂ ಅವರನ್ನು ಮಟ್ಟ ಹಾಕಲು ಬಿಜೆಪಿ- ಜೆಡಿಎಸ್ ಪಕ್ಷಗಳ ಎಲ್ಲ 28 ಅಭ್ಯರ್ಥಿಗಳನ್ನು ಗೆಲ್ಲಿಸಿ ಕಳುಹಿಸಬೇಕಿದೆ ಎಂದರು.

ರಾಜ್ಯ ಉಸ್ತುವಾರಿ ರಾಧಾಮೋಹನ್‍ದಾಸ್ ಅಗರವಾಲ್, ಸಹ ಉಸ್ತುವಾರಿ ಸುಧಾಕರ್ ರೆಡ್ಡಿ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮಾಜಿ ಡಿಸಿಎಂ ಗೋವಿಂದ ಕಾರಜೋಳ, ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ಬೆಂಗಳೂರು ದಕ್ಷಿಣ ಅಭ್ಯರ್ಥಿ ತೇಜಸ್ವಿ ಸೂರ್ಯ, ಬೆಂಗಳೂರು ಗ್ರಾಮಾಂತರದ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್, ಬೆಂಗಳೂರು ಕೇಂದ್ರÀದ ಅಭ್ಯರ್ಥಿ ಪಿ.ಸಿ.ಮೋಹನ್, ಬೆಂಗಳೂರು ಉತ್ತರದ ಅಭ್ಯರ್ಥಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಚಿಕ್ಕಬಳ್ಳಾಪುರ ಕ್ಷೇತ್ರದ ಅಭ್ಯರ್ಥಿ ಕೆ.ಸುಧಾಕರ್, ಶಾಸಕರಾದ ಡಾ.ಅಶ್ವತ್ಥನಾರಾಯಣ್, ವಿಶ್ವನಾಥ್, ಎಸ್.ರಘು,

ಎಸ್.ಮುನಿರಾಜು, ಉದಯ್ ಗರುಡಾಚಾರ್, ರವಿ ಸುಬ್ರಹ್ಮಣ್ಯ, ಸತೀಶ್ ರೆಡ್ಡಿ, ಎಂ.ಕೃಷ್ಣಪ್ಪ, ಗೋಪಾಲಯ್ಯ, ಸುರೇಶ್ ಕುಮಾರ್, ಮುನಿರತ್ನ, ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಧೀರಜ್ ಮುನಿರಾಜು, ಎಂಎಲ್‍ಸಿಗಳಾದ ರವಿಕುಮಾರ್, ಅ.ದೇವೇಗೌಡ, ಗೋಪಿನಾಥ ರೆಡ್ಡಿ, ಕೇಶವ ಪ್ರಸಾದ್, ಶ್ರೀಮತಿ ಭಾರತಿ ಶೆಟ್ಟಿ, ಮಾಜಿ ಸಚಿವ ಎಂ.ಟಿ.ಬಿ.ನಾಗರಾಜ್, ರಾಜ್ಯ ಕಾರ್ಯದರ್ಶಿ ಸಿ.ಮುನಿರಾಜು, ಬೆಂಗಳೂರು ದಕ್ಷಿಣ ಜಿಲ್ಲಾ ಅಧ್ಯಕ್ಷ ಮತ್ತು ಶಾಸಕ ರಾಮಮೂರ್ತಿ, ಬೆಂಗಳೂರು ಉತ್ತರ ಅಧ್ಯಕ್ಷ ಹರೀಶ್, ಬೆಂಗಳೂರು ಕೇಂದ್ರ ಅಧ್ಯಕ್ಷ ಸಪ್ತಗಿರಿ ಗೌಡ, ಪ್ರಮುಖರಾದ ಆನಂದಸ್ವಾಮಿ, ರಾಮಕೃಷ್ಣಪ್ಪ, ರಾಮಲಿಂಗಪ್ಪ ಮೊದಲಾದವರು ಭಾಗವಹಿಸಿದ್ದರು.

]]>
https://newxpressnews.com/%e0%b2%ae%e0%b2%a4%e0%b2%aa%e0%b3%8d%e0%b2%b0%e0%b2%ae%e0%b2%be%e0%b2%a3-%e0%b2%b9%e0%b3%86%e0%b2%9a%e0%b3%8d%e0%b2%9a%e0%b2%bf%e0%b2%b8%e0%b2%bf-%e0%b2%b0%e0%b2%be%e0%b2%9c%e0%b3%8d%e0%b2%af/feed/ 0
ಬಿಜೆಪಿ- ಜೆಡಿಎಸ್ ಬೇರೆ ಅಲ್ಲ: ಬಿ.ಎಸ್.ಯಡಿಯೂರಪ್ಪ https://newxpressnews.com/%e0%b2%ac%e0%b2%bf%e0%b2%9c%e0%b3%86%e0%b2%aa%e0%b2%bf-%e0%b2%9c%e0%b3%86%e0%b2%a1%e0%b2%bf%e0%b2%8e%e0%b2%b8%e0%b3%8d-%e0%b2%ac%e0%b3%87%e0%b2%b0%e0%b3%86-%e0%b2%85%e0%b2%b2%e0%b3%8d%e0%b2%b2/ https://newxpressnews.com/%e0%b2%ac%e0%b2%bf%e0%b2%9c%e0%b3%86%e0%b2%aa%e0%b2%bf-%e0%b2%9c%e0%b3%86%e0%b2%a1%e0%b2%bf%e0%b2%8e%e0%b2%b8%e0%b3%8d-%e0%b2%ac%e0%b3%87%e0%b2%b0%e0%b3%86-%e0%b2%85%e0%b2%b2%e0%b3%8d%e0%b2%b2/#respond Fri, 29 Mar 2024 16:30:00 +0000 https://newxpressnews.com/?p=1356 ಬೆಂಗಳೂರು, ಮಾರ್ಚ್ 29: ಈ ಸರಕಾರ ಜನರ ವಿಶ್ವಾಸ ಕಳೆದುಕೊಂಡಿದೆ ಎಂದು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು.


ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ಬಿಜೆಪಿ ಮತ್ತು ಜೆಡಿಎಸ್ ಆಹ್ವಾನಿತ ಪ್ರಮುಖರ ಉಪಸ್ಥಿತಿಯಲ್ಲಿ ನಗರದ ರ್ಯಾಡಿಸನ್ ಬ್ಲೂ ಹೋಟೆಲ್‍ನಲ್ಲಿ ಇಂದು ನಡೆದ ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಭೆಯಲ್ಲಿ ಮಾತನಾಡಿದ ಅವರು, ಸರಕಾರದ ಖಜಾನೆ ಖಾಲಿಯಾಗಿದ್ದು, ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರದ 6 ಸಾವಿರ ಜೊತೆಗೆ ನಾನು ಮುಖ್ಯಮಂತ್ರಿ ಆಗಿದ್ದಾಗ 4 ಸಾವಿರ ಹೆಚ್ಚುವರಿಯಾಗಿ ಕೊಡುತ್ತಿದ್ದೆ. ಆ 4 ಸಾವಿರ ನಿಂತು ಹೋಗಿದೆ ಎಂದು ಟೀಕಿಸಿದರು. ಸರಕಾರ ದಿವಾಳಿ ಆಗಿರುವುದಕ್ಕೆ ಬೇರೆ ಉದಾಹರಣೆ ಬೇಕೇ ಎಂದು ಪ್ರಶ್ನಿಸಿದರು.

ಬಿಜೆಪಿ- ಜೆಡಿಎಸ್ ಬೇರೆ ಅಲ್ಲ. ನಾವೆಲ್ಲ ಒಂದೇ ತಾಯಿ ಮಕ್ಕಳಂತೆ. ಬಿಜೆಪಿ- ಜೆಡಿಎಸ್ ಅಭ್ಯರ್ಥಿ ಯಾರೇ ಇರಲಿ; ಅವರನ್ನು ಗೆಲ್ಲಿಸಲು ಪ್ರಾಮಾಣಿಕವಾಗಿ ಪಣ ತೊಡಿ. ಆಗ ರಾಜ್ಯದ ಎಲ್ಲ ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲುವ ನಮ್ಮ ಪ್ರಯತ್ನವನ್ನು ತಡೆಯಲು ಯಾರಿಂದಲೂ ಅಸಾಧ್ಯ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ದೇಶ- ವಿದೇಶಗಳಲ್ಲಿ ನಿರಂತರ ಪ್ರವಾಸ ಮಾಡುತ್ತಿರುವ, ಒಂದು ದಿನ ರಜೆ ಪಡೆಯದೆ ದೇಶದ ಅಭಿವೃದ್ಧಿಗೆ ಶ್ರಮಿಸುವÀ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಜೀ ಮತ್ತು ಈ ಹರೆಯದಲ್ಲೂ ಅತ್ಯಂತ ಉತ್ಸಾಹದಿಂದ ರಾಜ್ಯ ಪ್ರವಾಸ ಮಾಡಲು ಸಿದ್ಧರಾಗಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ನಮ್ಮೆಲ್ಲರಿಗೂ ಆದರ್ಶಪ್ರಾಯರು ಎಂದರಲ್ಲದೆ, ಕಾಯಾ, ವಾಚಾ, ಮನಸಾ ಕೆಲಸ ಮಾಡಿ 28ಕ್ಕೆ 28 ಕ್ಷೇತ್ರ ಗೆಲ್ಲೋಣ ಎಂದು ಮನವಿ ಮಾಡಿದರು.

ಸಮನ್ವಯತೆಯಿಂದ ಕೆಲಸ ಮಾಡೋಣ- ದೇವೇಗೌಡ
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಮಾತನಾಡಿ, ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ನಮ್ಮೆದುರು ಇರುವ ಕಾಲಾವಧಿ ಅತ್ಯಂತ ಕಡಿಮೆ ಇದೆ. ನಾವು ಹಳೆಯದೆಲ್ಲವನ್ನು ಮರೆತು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.


ನಮ್ಮ ವಿರೋಧಿಗಳು ಬಲಿಷ್ಠರಿದ್ದಾರೆ. ನಾವು ಭೂತಕಾಲದ ಎಲ್ಲವನ್ನು ಮರೆಯದೆ ಇದ್ದರೆ 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲಲು ಸಾಧ್ಯವಾಗದು ಎಂದು ಕಿವಿಮಾತು ಹೇಳಿದರು. ಕಾಂಗ್ರೆಸ್ ಪಕ್ಷವು ಹಣಬಲದಿಂದ ಗೆಲ್ಲಲು ಮುಂದಾಗಿದೆ. ಬೇರೆ ರಾಜ್ಯಗಳಿಗೂ ಅದು ಚುನಾವಣೆಗೆ ಹಣದ ನೆರವು ನೀಡುತ್ತಿದೆ ಎಂದು ಗಮನ ಸೆಳೆದ ಅವರು, ಇವೆಲ್ಲವನ್ನೂ ನಾವು ಗಮನದಲ್ಲಿ ಇಟ್ಟುಕೊಳ್ಳಬೇಕು. ಭಿನ್ನಮತ ದೂರ ಮಾಡಲು ಯಾವುದೇ ನಾಯಕರ ಮನೆಗೆ ಹೋಗಲು ಸಿದ್ಧ ಎಂದು ನುಡಿದರು.


ಎರಡೂ ಪಕ್ಷದವರು ಜೊತೆಯಾಗಿ ಕೆಲಸ ಮಾಡಿದರೆ ಎಲ್ಲ ಕ್ಷೇತ್ರಗಳಲ್ಲಿ ನಮಗೆ ಗೆಲ್ಲುವ ಸಾಮಥ್ರ್ಯ ಇದೆ ಎಂದ ಅವರು, ಮೋದಿಯವರು ಮತ್ತು ತಮ್ಮ ನಡುವಿನ ಆತ್ಮೀಯ ಕ್ಷಣಗಳನ್ನು ನೆನಪಿಸಿಕೊಂಡರು. ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದಗೌಡ, ಲೋಕಸಭಾ ಚುನಾವಣೆಯ ರಾಜ್ಯ ಉಸ್ತುವಾರಿ ರಾಧಾಮೋಹನ್‍ದಾಸ್ ಅಗರವಾಲ್, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ರಾಜ್ಯದ ಮಾಜಿ ಸಚಿವ ಜಿ.ಟಿ. ದೇವೇಗೌಡ, ಎರಡೂ ಪಕ್ಷಗಳ ಆಹ್ವಾನಿತ ಮುಖಂಡರು ಭಾಗವಹಿಸಿದ್ದರು.

]]>
https://newxpressnews.com/%e0%b2%ac%e0%b2%bf%e0%b2%9c%e0%b3%86%e0%b2%aa%e0%b2%bf-%e0%b2%9c%e0%b3%86%e0%b2%a1%e0%b2%bf%e0%b2%8e%e0%b2%b8%e0%b3%8d-%e0%b2%ac%e0%b3%87%e0%b2%b0%e0%b3%86-%e0%b2%85%e0%b2%b2%e0%b3%8d%e0%b2%b2/feed/ 0
ನರೇಂದ್ರ ಮೋದಿಜೀ ಅವರ ಜನಪ್ರಿಯತೆ ಇನ್ನಷ್ಟು ಉತ್ತುಂಗಕ್ಕೆ ಏರಿದೆ: ಬಿ.ವೈ.ವಿಜಯೇಂದ್ರ https://newxpressnews.com/%e0%b2%a8%e0%b2%b0%e0%b3%87%e0%b2%82%e0%b2%a6%e0%b3%8d%e0%b2%b0-%e0%b2%ae%e0%b3%8b%e0%b2%a6%e0%b2%bf%e0%b2%9c%e0%b3%80-%e0%b2%85%e0%b2%b5%e0%b2%b0-%e0%b2%9c%e0%b2%a8%e0%b2%aa%e0%b3%8d%e0%b2%b0/ https://newxpressnews.com/%e0%b2%a8%e0%b2%b0%e0%b3%87%e0%b2%82%e0%b2%a6%e0%b3%8d%e0%b2%b0-%e0%b2%ae%e0%b3%8b%e0%b2%a6%e0%b2%bf%e0%b2%9c%e0%b3%80-%e0%b2%85%e0%b2%b5%e0%b2%b0-%e0%b2%9c%e0%b2%a8%e0%b2%aa%e0%b3%8d%e0%b2%b0/#respond Sat, 23 Mar 2024 08:58:38 +0000 https://newxpressnews.com/?p=1342 ಬೆಂಗಳೂರು, ಮಾರ್ಚ್ 23: ಕೇಂದ್ರದಲ್ಲಿ ಬಿಜೆಪಿ ಸರಕಾರ ಬಂದು 10 ವರ್ಷಗಳು ಕಳೆದರೂ ನರೇಂದ್ರ ಮೋದಿಜೀ ಅವರ ಜನಪ್ರಿಯತೆ ಇನ್ನೂ ಉತ್ತುಂಗಕ್ಕೆ ಏರಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದರು.


ಹೋಟೆಲ್ “ಜಿ.ಎಂ. ರಿಜಾಯ್ಸ್” ನಲ್ಲಿ ಬಿಜೆಪಿ ಲೋಕಸಭಾ ಚುನಾವಣಾ 2024ರ ಮಾಧ್ಯಮ ಕೇಂದ್ರದ ಉದ್ಘಾಟನೆ ಸಂದರ್ಭದಲ್ಲಿ ಅವರು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದರು. ಮತ್ತೊಮ್ಮೆ ಮೋದಿ ಸರಕಾರ ಎಂಬುದು ಕೇವಲ ಬಿಜೆಪಿ ಕಾರ್ಯಕರ್ತರ ಆಶಯವಲ್ಲ; ಇದು ರಾಜ್ಯದ ಮತ್ತು ದೇಶದ ಜವಾಬ್ದಾರಿಯುತ ನಾಗರಿಕ ಮತದಾರರ ನಿರ್ಧಾರ. ನರೇಂದ್ರ ಮೋದಿಯವರ ಕಳೆದ 10 ವರ್ಷಗಳ ಕಾರ್ಯವೈಖರಿ, ಆಡಳಿತ ವೈಖರಿ, ಕೇಂದ್ರದ ಮೋದಿಜೀ ನೇತೃತ್ವದ ಜನಪರ ಯೋಜನೆಗಳ ಪರಿಣಾಮವಾಗಿ ಕೇಂದ್ರದಲ್ಲಿ ಬಿಜೆಪಿ ಸರಕಾರ ಬಂದು 10 ವರ್ಷಗಳು ಕಳೆದರೂ ನರೇಂದ್ರ ಮೋದಿಜೀ ಅವರ ಜನಪ್ರಿಯತೆ ಇನ್ನೂ ಉತ್ತುಂಗಕ್ಕೆ ಏರಿದೆ ಎಂದು ವಿಶ್ಲೇಷಿಸಿದರು.


ಇದು ಮೊತ್ತಮೊದಲ ಬಾರಿಗೆ ಹೀಗಾಗಿದೆ. ದೇಶದ ಜನತೆ ಮೋದಿಯವರ ನಾಯಕತ್ವವನ್ನು ಮೆಚ್ಚಿಕೊಂಡಿದ್ದಾರೆ. ಅವರ ನಾಯಕತ್ವವನ್ನು ಒಪ್ಪಿಕೊಂಡಿದ್ದಾರೆ. ಮೋದಿಯವರ ಮತ್ತು ಬಿಜೆಪಿ ಕೇಂದ್ರ ಸರಕಾರದ ಯೋಜನೆಗಳು ಮನೆಮನೆಗೆ ತಲುಪಿದೆ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತದೆ ಎಂದು ವಿವರಿಸಿದರು. ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಪರಿವರ್ತಿಸುವ ಸಂಕಲ್ಪದೊಂದಿಗೆ ಕೇಂದ್ರದ ಮೋದಿಯವರ ನೇತೃತ್ವದ ಸರಕಾರ ಜನಪರ ಯೋಜನೆಗಳನ್ನು ನೀಡಿದೆ. ಹಾಗಾಗಿ ಮೋದಿ ಮತ್ತೊಮ್ಮೆ ಎಂಬ ಘೋಷಣೆ ದೇಶಾದ್ಯಂತ ಕೇಳಿಸುತ್ತಿದೆ ಎಂದು ತಿಳಿಸಿದರು.

ರಾಜ್ಯದ ಕಾಂಗ್ರೆಸ್ ಸರಕಾರ ನಿಷ್ಕ್ರಿಯ..
ಕರ್ನಾಟಕವು ದಕ್ಷಿಣ ಭಾರತದ ಬಿಜೆಪಿಯ ಹೆಬ್ಬಾಗಿಲು ಎಂಬುದನ್ನು ನಾವು ಮತ್ತೆ ಸಾಬೀತು ಮಾಡಬೇಕಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವು ನಿಷ್ಕ್ರಿಯವಾಗಿದೆ. ಅದು ಬರಗಾಲ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. 800ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡರೂ ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿಗಳು ಎಚ್ಚತ್ತುಕೊಳ್ಳದೆ ಇರುವುದು ನಿಜಕ್ಕೂ ದುರಂತವೇ ಸರಿ ಎಂದು ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದರು.

ಇಲ್ಲಿನ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಶೂನ್ಯ. ಅಲ್ಪಸಂಖ್ಯಾತರ ತುಷ್ಟೀಕರಣವನ್ನು ಮಾಡುತ್ತಲೇ ಬಂದಿದೆ. ಇದಕ್ಕೆ ತಕ್ಕ ಉತ್ತರವನ್ನು ಕೊಡುವ ಸಂದರ್ಭ, ಕಾಲ ಕೂಡಿ ಬಂದಿದೆ ಎಂಬ ಭಾವನೆ ಪ್ರತಿಯೊಬ್ಬರದು. ಹಿಂದೆ ಬಿಜೆಪಿ ಸರಕಾರ ಅಸ್ತಿತ್ವದಲ್ಲಿ ಇದ್ದಾಗ ಸನ್ಮಾನ್ಯ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ನೀಡಿದ ಕೊಡುಗೆಗಳು, ಕಾರ್ಯಕ್ರಮಗಳು, ಮಾನ್ಯ ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿ ನೀಡಿದ ಜನಪರ ಯೋಜನೆಗಳನ್ನು ರಾಜ್ಯದ ಜನತೆ ಮರೆತಿಲ್ಲ. ಒಂದು ಕಡೆ ಕೇಂದ್ರದಲ್ಲಿ ನರೇಂದ್ರ ಮೋದಿಜೀ ಅವರು, ಅಯೋಧ್ಯೆಯ ಭವ್ಯ ರಾಮಮಂದಿರ ನಿರ್ಮಿಸಿದ್ದಾರೆ. ಇದು ದೀರ್ಘ ಕಾಲದ ಹೋರಾಟ ಮತ್ತು ಪ್ರತಿಯೊಬ್ಬ ಭಾರತೀಯರ ಕನಸು ನನಸಾದ ಕಾಲ ಎಂದು ವಿಶ್ಲೇಷಣೆ ಮಾಡಿದರು.


370ನೇ ವಿಧಿ ರದ್ದತಿ, ತ್ರಿವಳಿ ತಲಾಖ್ ರದ್ದು ಸೇರಿ ಅನೇಕ ಕಾರ್ಯಗಳು ನಡೆದಿವೆ. ಮೂಲಭೂತ ಸೌಕರ್ಯ ನೀಡಲು ಕೇಂದ್ರ ಸರಕಾರ ಶ್ರಮಿಸುತ್ತಿದೆ. ಇದೆಲ್ಲದರ ಪರಿಣಾಮವಾಗಿ ದೇಶ ಮಾತ್ರವಲ್ಲದೆ ಕರ್ನಾಟಕ ರಾಜ್ಯದಲ್ಲಿ ಮತ್ತೊಮ್ಮೆ ಮೋದಿ ಸರಕಾರ ಎಂಬ ಅಭಿಪ್ರಾಯ ಸರ್ವಸಾಮಾನ್ಯವಾಗಿದೆ. ಎಲ್ಲ ಕಡೆಗಳಲ್ಲಿ ಅದನ್ನು ಕೇಳುವಂತಾಗಿದೆ ಎಂದು ತಿಳಿಸಿದರು.
ಮಾಧ್ಯಮಗಳು ಪ್ರಜಾಪ್ರಭುತ್ವದ ನಾಲ್ಕನೇ ಅಂಗ. ನ್ಯಾಯಾಂಗ, ಶಾಸಕಾಂಗ, ಕಾರ್ಯಾಂಗದಷ್ಟೇ ಪ್ರಾಮುಖ್ಯತೆಯನ್ನು ಅದು ಪಡೆದಿದೆ. ಮಾಧ್ಯಮ ರಂಗ ಪರಿವರ್ತನೆ ಆಗಿ ಪ್ರಜಾಪ್ರಭುತ್ವಕ್ಕೆ ದೊಡ್ಡ ಶಕ್ತಿ ಕೊಟ್ಟಿದೆ. ಚುನಾವಣೆ ಬಂದಾಗ ಪತ್ರಿಕಾ ರಂಗಕ್ಕೆ ಇನ್ನೂ ಹೆಚ್ಚು ಪ್ರಾಮುಖ್ಯತೆ ಸಹಜವಾಗಿಯೇ ಇರುತ್ತದೆ ಎಂದು ನುಡಿದರು.


ಇಂಥ ಸಂದರ್ಭದಲ್ಲಿ ಬಿಜೆಪಿ ವತಿಯಿಂದ ಮೀಡಿಯ ಸೆಂಟರ್ ಉದ್ಘಾಟನೆ ಮಾಡಿದ್ದೇವೆ. ಮಾಧ್ಯಮಗಳು ನಿರಂತರವಾಗಿ ಸುದ್ದಿ ಪ್ರಸಾರ ಮಾಡಲು ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಈ ಮಾಧ್ಯಮ ಕೇಂದ್ರದಲ್ಲಿ ವೈಫೈ ಸೇರಿದಂತೆ ಅತ್ಯಾಧುನಿಕ ವ್ಯವಸ್ಥೆ ಇರಲಿದೆ. ನಮ್ಮ ರಾಷ್ಟ್ರೀಯ ನಾಯಕರು ಯಾರೇ ಬಂದರೂ ಈ ಮಾಧ್ಯಮ ಕೇಂದ್ರಕ್ಕೆ ಭೇಟಿ ಕೊಡಲಿದ್ದಾರೆ. ಪತ್ರಿಕಾಗೋಷ್ಠಿಗಳನ್ನೂ ಇಲ್ಲಿಯೇ ಅಧಿಕೃತವಾಗಿ ನಡೆಸಲಾಗುವುದು ಎಂದು ವಿವರಿಸಿದರು.


ಚುನಾವಣಾ ಫಲಿತಾಂಶ ಪ್ರಕಟವಾಗುವವರೆಗೆ ಈ ಕೇಂದ್ರದಲ್ಲಿ ನಿರಂತರವಾಗಿ ಚಟುವಟಿಕೆಗಳು ನಡೆಯಲಿವೆ. ಈ ವ್ಯವಸ್ಥೆಯ ಸದುಪಯೋಗವನ್ನು ಪತ್ರಿಕಾ ಹಾಗೂ ಮಾಧ್ಯಮ ಸ್ನೇಹಿತರು ಪಡೆಯಬೇಕು ಎಂದು ಅವರು ಮನವಿ ಮಾಡಿದರು.

ಮುಖ್ಯಮಂತ್ರಿಗಳಿಗೆ ಜ್ಞಾನೋದಯ ಆಗಿದ್ದರೆ..
ಮುಖ್ಯಮಂತ್ರಿಗಳ ಹೇಳಿಕೆಯಲ್ಲಿ ‘ನದಿಗಳಲ್ಲಿ ನೀರಿಲ್ಲ; ಕುಡಿಯುವ ನೀರಿನ ಹಾಹಾಕಾರ ಇದೆ’ ಎಂದು ತಿಳಿಸಿದ್ದನ್ನು ಗಮನಿಸಿದ್ದೇನೆ. ಈ ಹಿಂದೆ ಯಾವತ್ತು ಕಾವೇರಿ ನೀರನ್ನು ತಮಿಳುನಾಡಿಗೆ ಯಥೇಚ್ಛವಾಗಿ ಹರಿಸುತ್ತಿದ್ದರೋ ಆಗಲೇ ಕಾಂಗ್ರೆಸ್ ಸರಕಾರ- ಮುಖ್ಯಮಂತ್ರಿಗಳಿಗೆ ಜ್ಞಾನೋದಯ ಆಗಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಇಂದು ನೀರಿಗಾಗಿ ಹಾಹಾಕಾರ ಇರುತ್ತಿರಲಿಲ್ಲ ಎಂದು ಅವರು ತಿಳಿಸಿದರು.

ವಿರೋಧ ಪಕ್ಷದ ನಾಯಕ ಆರ್. ಅಶೋಕ್, ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ಸುನೀಲ್ ಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಗೌಡ, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಮಾಜಿ ಶಾಸಕ ಎಸ್.ಎ. ರಾಮದಾಸ್, ರಾಜ್ಯ ಮುಖ್ಯ ವಕ್ತಾರ ಅಶ್ವಥನಾರಾಯಣ್, ರಾಜ್ಯ ವಕ್ತಾರರಾದ ಅಶೋಕ್ ಗೌಡ, ಹೆಚ್.ಎನ್. ಚಂದ್ರಶೇಖರ್, ಸುರಭಿ ಹೋದಿಗೆರೆ, ರಾಜ್ಯ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ ಮತ್ತು ರಾಜ್ಯ ಮಾಧ್ಯಮ ಸಹ-ಸಂಚಾಲಕ ಪ್ರಶಾಂತ್ ಕೆಡೆಂಜಿ ಮತ್ತು ಪ್ರಮುಖರು ಉಪಸ್ಥಿತರಿದ್ದರು.

]]>
https://newxpressnews.com/%e0%b2%a8%e0%b2%b0%e0%b3%87%e0%b2%82%e0%b2%a6%e0%b3%8d%e0%b2%b0-%e0%b2%ae%e0%b3%8b%e0%b2%a6%e0%b2%bf%e0%b2%9c%e0%b3%80-%e0%b2%85%e0%b2%b5%e0%b2%b0-%e0%b2%9c%e0%b2%a8%e0%b2%aa%e0%b3%8d%e0%b2%b0/feed/ 0
ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ನಟರಾಜ್ ಡಿ.ಎನ್ ಅವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ನೀಡಬೇಕೆಂದು ಕರ್ನಾಟಕ ರಾಜ್ಯ ಶಿಕ್ಷಣ ವೇದಿಕೆ ಒತ್ತಾಯ https://newxpressnews.com/%e0%b2%9a%e0%b2%be%e0%b2%ae%e0%b2%b0%e0%b2%be%e0%b2%9c%e0%b2%a8%e0%b2%97%e0%b2%b0-%e0%b2%b2%e0%b3%8b%e0%b2%95%e0%b2%b8%e0%b2%ad%e0%b2%be-%e0%b2%95%e0%b3%8d%e0%b2%b7%e0%b3%87%e0%b2%a4%e0%b3%8d%e0%b2%b0/ https://newxpressnews.com/%e0%b2%9a%e0%b2%be%e0%b2%ae%e0%b2%b0%e0%b2%be%e0%b2%9c%e0%b2%a8%e0%b2%97%e0%b2%b0-%e0%b2%b2%e0%b3%8b%e0%b2%95%e0%b2%b8%e0%b2%ad%e0%b2%be-%e0%b2%95%e0%b3%8d%e0%b2%b7%e0%b3%87%e0%b2%a4%e0%b3%8d%e0%b2%b0/#respond Tue, 27 Feb 2024 10:12:06 +0000 https://newxpressnews.com/?p=1295 ಬೆಂಗಳೂರು, ಫೆ. 27: ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ನಟರಾಜ್ ಡಿ.ಎನ್ ಅವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ನೀಡಬೇಕೆಂದು ಕರ್ನಾಟಕ ರಾಜ್ಯ ಶಿಕ್ಷಣ ವೇದಿಕೆ ಒತ್ತಾಯ ಮಾಡಿದೆ.

ಇದು ಕುರಿತು ವೇದಿಕೆಯ ಅಧ್ಯಕ್ಷ ಗಂಗಾಧರ ಮೂರ್ತಿ ಮಾಧ್ಯಮದೊಂದಿಗೆ ಮಾತನಾಡಿದ್ದು,ಶ್ರೀ ನಟರಾಜ್ ಡಿ.ಎನ್ ರವರು ಚಾಮರಾಜನಗರ ಜಿಲ್ಲೆಯ ಸಂತೆಮಾರನಹಳ್ಳಿ ಹೋಬಳಿ, ದೇಶವಳ್ಳಿ ಗ್ರಾಮದ ಸಾಮಾನ್ಯ ಕುಟುಂಬದಲ್ಲಿ 1974ರಲ್ಲಿ ಜನಿಸಿದ ಇವರು ಯಾವುದೇ ರಾಜಕೀಯ ಹಿನ್ನೆಲೆಯನ್ನು ಹೊಂದಿದವರಲ್ಲ. ಇವರು ಮೈಸೂರು ಮತ್ತು ಬೆಂಗಳೂರು ವಿಶ್ವವಿದ್ಯಾಲಯಗಳಲ್ಲಿ M.Sc,.M.Ed,.M.Phil,. ಉನ್ನತ ಪದವಿಗಳನ್ನು ಪಡೆದಿದ್ದು, ವಿದ್ಯಾರ್ಥಿ ಜೀವನದಿಂದಲೇ ಶಿಸ್ತು ಬದ್ಧ ಜೀವನವನ್ನು ಮೈಗೂಡಿಸಿಕೊಂಡು ಪ್ರಗತಿಪರ, ರೈತರ, ದಮನಿತರ ವಿದ್ಯಾರ್ಥಿಪರ ಹೋರಾಟಗಳನ್ನು ಮಾಡಿಕೊಂಡು ವಿದ್ಯಾರ್ಥಿ ನಾಯಕನಾಗಿ ಮೈಸೂರು ಮತ್ತು ಬೆಂಗಳೂರು ವಿಶ್ವವಿದ್ಯಾಲಯಗಳಲ್ಲಿ ತನ್ನದೇ ಆದ ಚಾಪನ್ನು ಮೂಡಿಸಿಕೊಂಡು ಬಂದಿರುತ್ತಾರೆ.

2004-05ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಬಿ.ಎಡ್ ಪದವೀಧರ ವೇದಿಕೆಯನ್ನು ಹುಟ್ಟು ಹಾಕುವ ಮೂಲಕ ವೇದಿಕೆಯ ರಾಜ್ಯಾಧ್ಯಕ್ಷರಾಗಿ ಹಲವಾರು ವಿದ್ಯಾರ್ಥಿ ಹೋರಾಟಗಳ ಮೂಲಕ ಸರ್ಕಾರದ ಗಮನವನ್ನು ಸೆಳೆಯುತ್ತಾ ಬಿ.ಎಡ್ ಪದವೀಧರ ಅಶೋತ್ತರಗಳಿಗೆ ಮತ್ತು ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಾ, ಸರ್ಕಾರದ ಹಂತಗಳಲ್ಲಿ ಹಲವಾರು ನೇಮಕಾತಿ ವಿಷಯ ಕುರಿತಂತ ಬೆಂಗಳೂರು ಮತ್ತು ವಿವಿಧ ಜಿಲ್ಲೆಗಳಲ್ಲಿ ತನ್ನದೇ ಆದ ವೇದಿಕೆಯ ಹೋರಾಟಗಳನ್ನು ರೂಪಿಸುವ ಮೂಲಕ ಸರ್ಕಾರ ಮತ್ತು ಶಿಕ್ಷಣ ಇಲಾಖೆಯ ಗಮನವನ್ನು ಸೆಳೆದು ಹಲವಾರು ನಿರುದ್ಯೋಗಿ ಬಿ.ಎಡ್ ಪದವೀಧರರಿಗೆ ಅನುಕೂಲವಾಗುವಂತೆ ವಿವಿಧ ಶಿಕ್ಷಣ ಇಲಾಖೆಗಳ ನೇಮಕಾತಿ ಅಧಿಸೂಚನೆಯನ್ನು ಹೊರ ಬೀಳುವಂತೆ ಮಾಡಿ ಉದ್ಯೋಗಗಳನ್ನು ಕಲ್ಪಿಸಿಕೊಳ್ಳುವ ನಿಟ್ಟಿನಲ್ಲಿ ತನ್ನದೇ ಆದ ವಿಶಿಷ್ಟ ಕೊಡುಗಳನ್ನು ನೀಡಿದ್ದಾರೆ.

ಈ ರೀತಿ ವಿದ್ಯಾರ್ಥಿ ದೆಸೆಯಿಂದಲೂ ನಾಯಕನಾಗಿ ಮತ್ತು ಕರ್ನಾಟಕ ರಾಜ್ಯ ಬಿ.ಎಡ್ ಪದವೀಧರ ವೇದಿಕೆಯ ಅಧ್ಯಕ್ಷರಾಗಿದ್ದ ಇವರನ್ನು ಗುರುತಿಸಿದ ರಾಜ್ಯ ಮತ್ತು ರಾಷ್ಟ್ರದ ಗಮನ ಸೆಳೆದಿರುವ ನಾಡಿನ ದೊರೆ ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರು 2006ರಲ್ಲಿ ಶ್ರೀ ನಟರಾಜ್ ಡಿ.ಎನ್ ರವರಿಗೆ ಬೆಂಗಳೂರು ಪದವೀಧರ ಕ್ಷೇತ್ರದ ಟಿಕೆಟ್ ನೀಡಿ ಮೊದಲ ಬಾರಿಗೆ ಚುನಾವಣಾ ಕಣಕ್ಕೆ ಇಳಿಸುವ ಮೂಲಕ ಇವರ ರಾಜಕೀಯ ಪ್ರವೇಶಕ್ಕೆ ಮುನ್ನುಡಿ ಬರೆದಿದ್ದಾರೆ. ಹೀಗೆ ಶ್ರೀ ನಟರಾಜ್ ಡಿ.ಎನ್ ರವರು ರಾಜಕೀಯ ಪ್ರವೇಶ ಪಡೆದ ದಿನದಿಂದಲೂ ಇಲ್ಲಿಯವರೆಗೂ ಬೆಂಬಲ ಮತ್ತು ಮಾರ್ಗದರ್ಶನವನ್ನು ಮಾಡುತ್ತಾ ಬಂದಿರುವ ಸನ್ಮಾನ್ಯ ಶ್ರೀ ಸತೀಶ್ ಜಾರಕಿಹೊಳಿಯವರು ಮತ್ತು ಅಂಬೇಡ್ಕರ್ ವಾದಿಗಳಾದ ಶ್ರೀ ಎಚ್. ಸಿ ಮಾದೇವಪ್ಪನವರು. ಚಾಮರಾಜನಗರದ ಅಭಿವೃದ್ಧಿಯ ಹರಿಕಾರರಾದ ದಿವಂಗತ ಶ್ರೀ ಎಚ್ ಸಿ ಮಹದೇವ ಪ್ರಸಾದ್ ಮತ್ತು ದಿವಂಗತ ಶ್ರೀ ಧ್ರುವನಾರಾಯಣ್ ರವರ ಮಾರ್ಗದರ್ಶನದಲ್ಲಿ ತತ್ವ ಸಿದ್ದಾಂತಗಳನ್ನು ಮೈಗೂಡಿಸಿಕೊಂಡು ಸಕ್ರಿಯ ರಾಜಕಾರಣದಲ್ಲಿ ಸುಮಾರು ಎರಡು ದಶಕಗಳ ಸುಧೀರ್ಘ ಅನುಭವವುಳ್ಳ ವ್ಯಕ್ತಿಯಾಗಿದ್ದಾರೆ. ಹಾಗೆಯೇ ಯಾವುದೇ ರಾಜಕೀಯ ಸ್ಥಾನಮಾನವಿಲ್ಲದಿದ್ದರೂ ಕಾಂಗ್ರೆಸ್ ಪಕ್ಷದ ಶಿಸ್ತು ಬದ್ಧ ಕಾರ್ಯಕರ್ತನಾಗಿ ರಾಜ್ಯಮಟ್ಟದಲ್ಲಿ ತನ್ನನ್ನು ತಾನು ಗುರುತಿಸಿಕೊಂಡಿರುತ್ತಾರೆ

2009ರ ಬೈ ಎಲೆಕ್ಷನ್ 2013 ಮತ್ತು 2018ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಗಳಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಕ್ಕೆ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿ ಹೋರಾಟ ನಡೆಸಿರುತ್ತಾರೆ. ಪಕ್ಷ ಟಿಕೆಟ್ ನೀಡದಿದ್ದಾಗ ಪಕ್ಷ ಟಿಕೆಟ್ ನೀಡಿದ ಅಭ್ಯರ್ಥಿಗಳ ಪರ ಅವರ ಗೆಲುವಿಗಾಗಿ ದುಡಿದಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೊಳ್ಳೇಗಾಲ ಕ್ಷೇತ್ರದ ಪ್ರಸ್ತುತ ಮಾನ್ಯ ಶಾಸಕರಾದ ಎಚ್.ಆರ್ ಕೃಷ್ಣಮೂರ್ತಿ ಅವರ ಗೆಲುವಿಗಾಗಿ ಮುಂಚೂಣಿಯಲ್ಲಿ ನಿಂತು ಗೆಲುವನ್ನು ತಂದು ಕೊಡುವುದರಲ್ಲಿ ಇವರ ಪಾತ್ರ ಪ್ರಮುಖವಾಗಿರುತ್ತದೆ.

ಈ ರೀತಿ ಸುಮಾರು 20 ವರ್ಷಗಳ ಸುದೀರ್ಘ ರಾಜಕೀಯ ಅನುಭವವುಳ್ಳ. ಒಬ್ಬ ನಿಷ್ಠಾವಂತ ಯುವ ಕಾಂಗ್ರೆಸ್ ನಾಯಕರಾದ ಶ್ರೀ ನಟರಾಜ್ ಡಿ.ಎನ್ ರವರಿಗೆ ಚಾಮರಾಜನಗರದ ಲೋಕಸಭಾ ಮೀಸಲು ಕ್ಷೇತ್ರಕ್ಕೆ ಟಿಕೆಟ್ ನೀಡುವ ಮೂಲಕ ಒಬ್ಬ ಯುವ ದಲಿತ ಮುಖಂಡನನ್ನು ಕಾಂಗ್ರೆಸ್ ಲೋಕಸಭೆಗೆ ಕಳಿಸುವ ಮೂಲಕ ಮತ್ತೊಂದು ಇತಿಹಾಸಕ್ಕೆ ನಾಂದಿಯಾಗುವಂತೆ ಮಾಡಬೇಕೆಂದು ಕರ್ನಾಟಕ ರಾಜ್ಯ ಶಿಕ್ಷಣ ವೇದಿಕೆ ಇವರ ಶಿಕ್ಷಣ ಕ್ಷೇತ್ರ ಕಾಳಜಿ, ರೈತರ ಬಗ್ಗೆ ಹೊಂದಿರುವ ಕಾಳಜಿ, ಸಮಾಜದ ದೀನದಲಿತರ ಬಗ್ಗೆ ಇರುವ ಅಪಾರ ಕಾಳಜಿಯನ್ನು ಗುರುತಿಸಿ ಇಂತಹ ಯುವ ಶಕ್ತಿಯ ಬೆಳವಣಿಗೆಗೆ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಮತ್ತು ಮಾನ್ಯ ಮುಖ್ಯಮಂತ್ರಿಗಳು ಅನುವು ಮಾಡಿಕೊಡಬೇಕೆಂದು ಶಿಕ್ಷಣ ವೇದಿಕೆಯು ಈ ಪತ್ರಿಕಾ ಹೇಳಿಕೆಯ ಮೂಲಕ ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇವೆ ಎಂದರು.

ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿಗೆ ಇವರ ಆದ್ಯತೆಗಳು:

ಶ್ರೀ ನಟರಾಜ್ ಡಿ. ಎನ್ ರವರು ಸ್ವತಹ ಚಾಮರಾಜನಗರ ಜಿಲ್ಲೆಯಾವರಾಗಿರುವುದರಿಂದ ಜಿಲ್ಲೆಯ ವಾಸ್ತವ ಚಿತ್ರಣವನ್ನು ಮತ್ತು ಜನರ ನಾಡಿಮಿಡಿತವನ್ನು ಅರಿತವರಾಗಿದ್ದು, ಈ ಜಿಲ್ಲೆ ಗಡಿನಾಡು ಜಿಲ್ಲೆಯಾಗಿರುವುದರಿಂದ ಇಲ್ಲಿನ ಭಾಷೆ ಮತ್ತು ಸಾಂಸ್ಕೃತಿಗೆ ಧಕ್ಕೆಯಾಗದ ರೀತಿ ಮತ್ತು ಗೂಳೆ ಹೋಗದ ರೀತಿ ಕ್ರಮವಹಿಸಿ, ಜಿಲ್ಲೆಯ ಎ.ಪಿ.ಎಂ.ಸಿ ಮಾರುಕಟ್ಟೆ ಅಭಿವೃದ್ಧಿಗೊಳಿಸುವುದು ಇವರ ಪ್ರಮುಖ ಆದ್ಯತೆಯಾಗಿದೆ. ಜೊತೆಗೆ ವ್ಯಾಪಾರ ವಹಿವಾಟಿನಲ್ಲಿ ಚಾಮರಾಜನಗರ ಅತ್ಯಂತ ಹಿಂದುಳಿದ ಜಿಲ್ಲೆಗಳಲ್ಲಿ ಒಂದಾಗಿದ್ದು ಅಂತರ್ ರಾಜ್ಯಗಳ ಪ್ರಭಾವಕ್ಕೆ ಒಳಗಾಗಿ ವಲಸೆ ಹೋಗುವುದನ್ನು ತಪ್ಪಿಸಿ ಅವರ ಬದುಕಿಗಾಗಿ ಪರ್ಯಾಯ ಜೀವನ ಮಾರ್ಗೋಪಾಯಗಳನ್ನು ಕೊಂಡುಕೊಳ್ಳುವುದರ ಜೊತೆಗೆ ಈ ಜಿಲ್ಲೆಗೆ ಹೈದರಾಬಾದ್ ಕರ್ನಾಟಕಕ್ಕೆ ಕೊಟ್ಟಂತಹ 371J ವಿಧಿಯನ್ನು ನಮ್ಮ ಜಿಲ್ಲೆಗೆ ನೀಡುವಂತೆ ಮಾಡುವುದು ಇವರ ಮತ್ತೊಂದು ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ.

ಹಾಗೆಯೇ ಶಿಕ್ಷಣ, ಉದ್ಯೋಗ, ರೈತರ ಪರ ಯೋಜನೆಗಳನ್ನು ಅನುಷ್ಠಾನ, ಮೂಲಭೂತ ಸೌಕರ್ಯಗಳು. ರಾಜ್ಯ ಮತ್ತು ರಾಷ್ಟ್ರದ ಹೆದ್ದಾರಿಗಳ ಉನ್ನತೀಕರಣ, ಜಾನಪದ ಕಲೆ, ಸಾಹಿತ್ಯ, ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವುದು. ಕೈಗಾರಿಕಾ ವಲಯಕ್ಕೆ ಉತ್ತೇಜನ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಕೃಷಿ ಆದ್ಯತೆ ಕಾವೇರಿ ನೀರಿನ ಸದ್ಬಳಕೆ ಹಾಗೂ ಪರಿಸರ ಸಂರಕ್ಷಣೆ ಮೂಲಕ ಚಾಮರಾಜನಗರ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ದುಡಿಯುವುದು ಇವರ ಪ್ರಮುಖ ಕನಸುಗಳಲ್ಲಿ ಒಂದಾಗಿದೆ.

]]>
https://newxpressnews.com/%e0%b2%9a%e0%b2%be%e0%b2%ae%e0%b2%b0%e0%b2%be%e0%b2%9c%e0%b2%a8%e0%b2%97%e0%b2%b0-%e0%b2%b2%e0%b3%8b%e0%b2%95%e0%b2%b8%e0%b2%ad%e0%b2%be-%e0%b2%95%e0%b3%8d%e0%b2%b7%e0%b3%87%e0%b2%a4%e0%b3%8d%e0%b2%b0/feed/ 0
ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಅನಂತ್ ಕುಮಾರ್ ಪರಿಶ್ರಮ ಮರೆಯಲು ಸಾಧ್ಯವೇ ಇಲ್ಲ : ಬಿ.ವೈ. ವಿಜಯೇಂದ್ರ https://newxpressnews.com/%e0%b2%b0%e0%b2%be%e0%b2%9c%e0%b3%8d%e0%b2%af%e0%b2%a6%e0%b2%b2%e0%b3%8d%e0%b2%b2%e0%b2%bf-%e0%b2%85%e0%b2%a7%e0%b2%bf%e0%b2%95%e0%b2%be%e0%b2%b0%e0%b2%a6-%e0%b2%9a%e0%b3%81%e0%b2%95%e0%b3%8d%e0%b2%95/ https://newxpressnews.com/%e0%b2%b0%e0%b2%be%e0%b2%9c%e0%b3%8d%e0%b2%af%e0%b2%a6%e0%b2%b2%e0%b3%8d%e0%b2%b2%e0%b2%bf-%e0%b2%85%e0%b2%a7%e0%b2%bf%e0%b2%95%e0%b2%be%e0%b2%b0%e0%b2%a6-%e0%b2%9a%e0%b3%81%e0%b2%95%e0%b3%8d%e0%b2%95/#respond Mon, 13 Nov 2023 05:04:50 +0000 https://newxpressnews.com/?p=876 ಬೆಂಗಳೂರು, ನ, 13: ರಾಜ್ಯದಲ್ಲಿ ಬಿಜೆಪಿಗೆ ಭದ್ರ ಬುನಾದಿ ಹಾಕಿದ್ದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಹಿರಿಯ ರಾಜಕೀಯ ಮುತ್ಸದ್ದಿ ಅನಂತ್ ಕುಮಾರ್. ಕರ್ನಾಟಕದಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲು ಅನಂತ್ ಕುಮಾರ್ ಅವರ ಪರಿಶ್ರಮವನ್ನು ಮರೆಯಲು ಸಾಧ್ಯವೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಕೇಂದ್ರ ಸಚಿವರಾಗಿದ್ದ ಅನಂತಕುಮಾರ್ ಅವರ ಪುಣ್ಯತಿಥಿ ಹಿನ್ನೆಲೆಯಲ್ಲಿ ಲಾಲ್ ಬಾಗ್ ವೆಸ್ಟ್ಗೇಟ್ ನಿಂದ ಅದಮ್ಯಚೇತನದವರೆಗೆ ಆಯೋಜಿಸಿದ್ದ 4 ನೇ “ಅನಂತ ಸ್ಮೃತಿ” ನಡಿಗೆ ಮತ್ತು ಪಂಜಿನ ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಯಡಿಯೂರಪ್ಪ ಮತ್ತು ಅನಂತ್ ಕುಮಾರ್ ಅವರು ಪಕ್ಷದ ಸಂಘಟನೆ ಬಗ್ಗೆ ಸದಾ ಕಾಲ ಚರ್ಚಿಸುತ್ತಿದ್ದರು. ರಾಜ್ಯದಲ್ಲಿ ಪಕ್ಷ ಸಂಘಟನೆ ಬಲಿಷ್ಠಗೊಳ್ಳಲು ಈ ಇಬ್ಬರೂ ನಾಯಕರ ಪರಿಶ್ರಮ ಅನನ್ಯ ಎಂದರು.

ಇವರ ನಡುವೆ ಅವಿನಾಭಾವ ಸಂಬಂಧವಿತ್ತು. ಬೆಂಗಳೂರಿನ ಶಾಂತಿನಗರ ನಿವಾಸದಲ್ಲಿ ಹಗಲಿರುಳು ಜನಪರ ವಿಚಾರಗಳ ಕುರಿತು ಚರ್ಚಿಸುತ್ತಿದ್ದರು. ಅನಂತ್ ಕುಮಾರ್ ಅವರು ಮನೆಗೆ ಬಂದ ಸಂದರ್ಭದಲ್ಲಿ ಯಡಿಯೂರಪ್ಪ ತಮ್ಮ ಅಧಿಕೃತ ಪ್ರವಾಸ, ಕಾರ್ಯಕ್ರಮಗಳನ್ನು ಮರೆಯುತ್ತಿದ್ದರು. ಇಲ್ಲವೆ ಮುಂದೂಡುತ್ತಿದ್ದರು. ಇಬ್ಬರೂ ಹಗಲಿರುಳು ಪಕ್ಷದ ಬೆಳವಣಿಗೆಯನ್ನೇ ಧ್ಯಾನಿಸುತ್ತಿದ್ದರು. ಬಿಜೆಪಿಗೆ ರಾಜ್ಯದಲ್ಲಿ ಭದ್ರ ಬುನಾದಿ ದೊರೆಯಲು ಈ ನಾಯಕರೇ ಕಾರಣ ಎಂದರು.

ತೇಜಸ್ವಿ ಅನಂತ್ ಕುಮಾರ್ ಅವರ ಕ್ರಿಯಾಶೀಲತೆ ಮಾದರಿಯಾಗಿದ್ದು, ಅವರು ಎಂದೂ ಮನೆಯಲ್ಲಿ ಸುಮ್ಮನೆ ಕುಳಿತರವರೇ ಅಲ್ಲ. ಅನಂತ್ ಕುಮಾರ್ ಅವರ ತಾಯಿ ಹೆಸರಿನಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಅದಮ್ಯ ಚೇತನ ಸಂಸ್ಥೆಯನ್ನು ಸ್ಥಾಪಿಸಿ, ಹಸಿದವರಿಗೆ ಅನ್ನದಾಸೋಹದ ಸೇವೆ ಮಾಡುತ್ತಿದ್ದಾರೆ. ರಾಜಕಾರಣಿಗಳು ಪ್ರತಿಯೊಂದು ಸೇವೆಯಲ್ಲಿ ರಾಜಕೀಯ ಲಾಭ ನೋಡುತ್ತಾರೆ. ಆದರೆ ತೇಜಸ್ವಿನಿ ಅನಂತ್ ಕುಮಾರ್ ಅವರು ರಾಜಕೀಯ ಪ್ರತಿಫಲಾಪೇಕ್ಷೆಯಿಲ್ಲದೇ, ತನ್ನ ಸೇವೆ ಮೂಲಕ ಪ್ರೇರಣೆಯಾಗಿದ್ದಾರೆ ಎಂದು ಹೇಳಿದರು.

ತೇಜಸ್ವಿನಿ ಅನಂತ್ ಕುಮಾರ್ ಮಾತನಾಡಿ, ಅನಂತ್ ಕುಮಾರ್ ಅವರು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಆರು ಬಾರಿ ಆಯ್ಕೆಯಾಗಿ ಬೆಂಗಳೂರಿಗೆ ಹೊಸ ಸ್ವರೂಪ, ಅಭಿವೃದ್ಧಿಗೆ ಹೊಸ ಬೆಳಕು ನೀಡಿದ್ದರು. ಅನಂತ ಕುಮಾರ್ ಅವರ ನೇತೃತ್ವ, ಅವರ ಕತೃತ್ವವನ್ನು ಸ್ಮರಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.

ರಾಜ್ಯ ಬಿಜೆಪಿಗೆ ಬಿ.ವೈ. ವಿಜಯೇಂದ್ರ ನೂತನ ಸಾರಥಿಯಾಗಿದ್ದು, ಹೊಸ ಗಾಳಿ ಬೀಸುವಂತಾಗಿದ್ದು, ಬದಲಾವಣೆಗೆ ಇದು ನಾಂದಿಯಾಗಲಿದ್ದು, ಪಕ್ಷಕ್ಕೆ ಶಕ್ತಿ ಬೇಕಾಗಿತ್ತು ಎಂದರು. ತಾವು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯೆ ನೀಡಲು ಬಯಸದ ತೇಜಸ್ವಿನಿ ಅನಂತ್ ಕುಮಾರ್, ಈ ಬಗ್ಗೆ ಮಾತನಾಡಲು ಇದು ಸೂಕ್ತ ಸಮಯವಲ್ಲ ಎಂದರು.

ಕಾರ್ಯಕ್ರಮದಲ್ಲಿ ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ಕೆ.ಸಿ. ರಾಮಮೂರ್ತಿ, ರವಿ ಸುಬ್ರಮಣ್ಯ, ಅದಮ್ಯ ಚೇತನ ಸಂಸ್ಥೆಯ ಅಧ್ಯಕ್ಷರಾದ ಪ್ರೊ. ಪಿ.ವಿ. ಕೃಷ್ಣ ಭಟ್ ಮತ್ತಿರರರು ಉಪಸ್ಥಿತರಿದ್ದರು.

]]>
https://newxpressnews.com/%e0%b2%b0%e0%b2%be%e0%b2%9c%e0%b3%8d%e0%b2%af%e0%b2%a6%e0%b2%b2%e0%b3%8d%e0%b2%b2%e0%b2%bf-%e0%b2%85%e0%b2%a7%e0%b2%bf%e0%b2%95%e0%b2%be%e0%b2%b0%e0%b2%a6-%e0%b2%9a%e0%b3%81%e0%b2%95%e0%b3%8d%e0%b2%95/feed/ 0
ಕರ್ನಾಟಕ ರೆಡ್ಡಿ ಜನಸಂಘದಿಂದ ನೂತನ ಸಚಿವರು, ಶಾಸಕರಿಗೆ ಸನ್ಮಾನ https://newxpressnews.com/%e0%b2%95%e0%b2%b0%e0%b3%8d%e0%b2%a8%e0%b2%be%e0%b2%9f%e0%b2%95-%e0%b2%b0%e0%b3%86%e0%b2%a1%e0%b3%8d%e0%b2%a1%e0%b2%bf-%e0%b2%9c%e0%b2%a8%e0%b2%b8%e0%b2%82%e0%b2%98%e0%b2%a6%e0%b2%bf%e0%b2%82%e0%b2%a6/ https://newxpressnews.com/%e0%b2%95%e0%b2%b0%e0%b3%8d%e0%b2%a8%e0%b2%be%e0%b2%9f%e0%b2%95-%e0%b2%b0%e0%b3%86%e0%b2%a1%e0%b3%8d%e0%b2%a1%e0%b2%bf-%e0%b2%9c%e0%b2%a8%e0%b2%b8%e0%b2%82%e0%b2%98%e0%b2%a6%e0%b2%bf%e0%b2%82%e0%b2%a6/#respond Wed, 12 Jul 2023 14:56:32 +0000 https://newxpressnews.com/?p=122 ಬೆಂಗಳೂರು, ಜು, 12: ರೆಡ್ಡಿ ಜನಾಂಗದಲ್ಲೂ ಬಡಜನರಿದ್ದು, ಸಮುದಾಯದ ಶ್ರೇಯೋಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಕರ್ನಾಟಕ ರೆಡ್ಡಿ ಜನ ಸಂಘದಿಂದ ವಿಧಾನಸಭೆಗೆ ರೆಡ್ಡಿ ಸಮುದಾಯದಿಂದ ಆಯ್ಕೆಯಾಗಿರುವ ನೂತನ ಶಾಸಕರು ಮತ್ತು ಸಚಿವರಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಗೌರವ ಸ್ವೀಕರಿಸಿ ಮಾತನಾಡಿದ ಅವರು. ರೆಡ್ಡಿ ಜನಾಂಗ ಸಾಮಾಜಿಕ, ಆರ್ಥಿಕವಾಗಿ ಮತ್ತಷ್ಟು ಬಲಿಷ್ಠವಾಗಬೇಕು. ಇದೇ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರದಲ್ಲಿ ರಾಜಕೀಯ ಪ್ರಾತಿನಿಧ್ಯ ದೊರೆತಿದ್ದು, ಇದು ಇನ್ನಷ್ಟು ಹೆಚ್ಚಾಗಬೇಕು. ಆಯ್ಕೆಯಾಗಿರುವ ಶಾಸಕರ ಜೊತೆಗೂಡಿ ಸಮುದಾಯದ ಶ್ರೇಯೋಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದರು.

ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಮಾತನಾಡಿ, ರೆಡ್ಡಿ ಜನಾಂಗ ಭವ್ಯ ಇತಿಹಾಸ ಹೊಂದಿದ್ದು, ಇದು ಜಾತಿಯಲ್ಲ. ಮಹತ್ವದ ಸಾಂಸ್ಕೃತಿಕ ನೆಲಗಟ್ಟನ್ನು ಹೊಂದಿದೆ. ಸಮುದಾಯ ಎಲ್ಲಾ ಕ್ಷೇತ್ರಗಳಲ್ಲಿ ತನ್ನನ್ನು ತೊಡಗಿಸಿಕೊಂಡು ಉತ್ತಮ ಸಾಧನೆಯತ್ತ ಮುನ್ನಡೆದಿದೆ. ಇತ್ತೀಚಿನ ದಿನಗಳಲ್ಲಿ ಸಂಘದಲ್ಲಿ ಕ್ರಿಯಾತ್ಮಕ ಚಟುವಟಿಕೆ ಹೆಚ್ಚಾಗಿದೆ. ರಾಜ್ಯದಲ್ಲಿ ಉತ್ತಮ ಶಕ್ತಿಯನ್ನು ಹೊಂದಿರುವ ಸಮಾಜವಾಗಿ ಸಂಘಟಿತ ವಾಗಿದೆ. ನ್ಯಾಯದ ವಿರುದ್ಧ ಧಿಟ್ಟತನದಿಂದ ಹೋರಾಡುವ ಛಲ ಹೊಂದಿರುವ ರೆಡ್ಡಿ ಸಮುದಾಯದ ಮೂಲ ಗುಣ. ಇದರಿಂದಾಗಿ ರಾಜ್ಯದ ಜನಮಾನಸದಲ್ಲಿ ವಿಶೇಷ ಸ್ಥಾನಮಾನ ಹೊಂದಿದ್ದೇವೆ ಎಂದರು.

ಹರಿಹರ ತಾಲ್ಲೂಕಿನ ಎರೆ ಹೊಸಹಳ್ಳಿಯ ರೆಡ್ಡಿ ಗುರುಪೀಠದ ವೇಮನಾನಂದ ಸ್ವಾಮೀಜಿ ಅವರು ಆಶೀರ್ವಚನ ನೀಡಿದರು.

]]>
https://newxpressnews.com/%e0%b2%95%e0%b2%b0%e0%b3%8d%e0%b2%a8%e0%b2%be%e0%b2%9f%e0%b2%95-%e0%b2%b0%e0%b3%86%e0%b2%a1%e0%b3%8d%e0%b2%a1%e0%b2%bf-%e0%b2%9c%e0%b2%a8%e0%b2%b8%e0%b2%82%e0%b2%98%e0%b2%a6%e0%b2%bf%e0%b2%82%e0%b2%a6/feed/ 0